Breaking News ವಿಟ್ಲ: ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ್ಯು ➤ ಕಟ್ಟಡ ಕಾಮಗಾರಿ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.07. ಕಟ್ಟಡ ಕಾಮಗಾರಿಗಾಗಿ ಗುಡ್ಡ ಅಗೆಯಲಾಗುತ್ತಿದ್ದ ವೇಳೆ ಏಕಾಏಕಿ ಮೇಲ್ಭಾಗದ ಗುಡ್ಡ ಕುಸಿದುಬಿದ್ದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕನ್ಯಾನ ಸಮೀಪದ ಒಡಿಯೂರು ಎಂಬಲ್ಲಿ ಶನಿವಾರದಂದು ನಡೆದಿದೆ.


ಮೃತರನ್ನು ರಮೇಶ್, ಪ್ರಕಾಶ್, ಬಾಳಪ್ಪ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪ್ರಭಾಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹತ್ ಗಾತ್ರದಲ್ಲಿ ಮಣ್ಣು ಕುಸಿದಿದ್ದರಿಂದ ಕೆಳಗಿನ ಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತಾದರೂ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಗೂ ವಿಟ್ಲ ಠಾಣಾ ಪೊಲೀಸರು ದೌಡಾಯಿಸಿದ್ದಾರೆ.

Also Read  ಪರಶುರಾಮ ಥೀಂ ಪಾರ್ಕ್ ಹಗರಣ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಸಸ್ಪೆಂಡ್

error: Content is protected !!