ಉಳ್ಳಾಲ: ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ



ಉಳ್ಳಾಲ, ಡಿ.8: ಶಂಕಿತ ಇಲಿ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.





ಮೃತರನ್ನು ಉಳ್ಳಾಲದ ಕುತ್ತಾರಿನ ತೇವುಲ ನಿವಾಸಿ ಮನೋಜ್ ಕುಮಾರ್(28) ಎಂದು ಗುರುತಿಸಲಾಗಿದೆ.






ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮನೋಜ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ್ವರ ಗುಣವಾಗದ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಅಲ್ಲೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!
Scroll to Top