ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9    2019-20ನೇ ಸಾಲಿನಲ್ಲಿ ಅಕಾಡೆಮಿಯಿಂದ ಗುರುಶಿಷ್ಯ ಪರಂಪರೆಯಡಿ ಕಲಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನವೆಂಬರ್ 4 ರಂದು ಸರ್ವ ಸದಸ್ಯರ ಸಭೆ ತೀರ್ಮಾನದಂತೆ, ಈ ಯೋಜನೆಯನ್ನು ಕೈಬಿಡಲಾಗಿದೆ. ಇದೀಗ ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ- ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.


ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10.000ಗಳನ್ನು ಶಿಷ್ಯವೇತನವಾಗಿ ನೀಡಲಾಗುವುದು. ಅರ್ಜಿಗಳನ್ನು ಅಕಾಡೆಮಿಯ ಕಚೇರಿ ವೇಳೆಯಲ್ಲಿ (ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆವರೆಗೆ) ಉಚಿತವಾಗಿ ಪಡೆಯಬಹುದು. ಹಾಗೂ ಅಕಾಡೆಮಿ ಅಂರ್ತಜಾಲ ತಾಣದ  ಮೂಲಕ ಅರ್ಜಿ ಪಡೆದು ಸಲ್ಲಿಸಬಹುದು. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃ ತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದು. ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ನೀಡಲಾಗಿದೆ. ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ರೂ. 10 ರೂಪಾಯಿ ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 20. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರು, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ರಫ್ತಾರ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನ ಪೆಟ್ರೋಲಿಯಂ ತೈಲ ಘಟಕದಲ್ಲಿ ಆನ್‌ಸೈಟ್ ತುರ್ತು ಅಣುಕು ಕಾರ್ಯಾಚರಣೆ

error: Content is protected !!
Scroll to Top