ತೀವ್ರ ವಿರೋಧದ ಮಧ್ಯೆ ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಹೊಸದಿಲ್ಲಿ, ಡಿ.10: ಭಾರೀ ವಿರೋಧದ ಮಧ್ಯೆಯೂ   ಪೌರತ್ವ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ.

 

ಗೃಹ ಸಚಿವ ಅಮಿತ್ ಶಾ ಸಂಸತ್ ನಲ್ಲಿ ಡಿ.9 ರಂದು ಬೆಳಗ್ಗೆ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ್ದರು. ಗೃಹ ಸಚಿವರು ಮಸೂದೆ ಮಂಡನೆ ಮಾಡುತ್ತಿದ್ದಂತೆಯೇ ಸದನದಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಈ ಸುದೀರ್ಘ ಚರ್ಚೆಯ ಬಳಿಕ ಮಧ್ಯರಾತ್ರಿಯಲ್ಲಿ ಮಸೂದೆ ಅಂಗೀಕಾರವಾಗಿದೆ.

ಸದನದಲ್ಲಿದ್ದ ಹಾಜರಿದ್ದ 391 ಸದಸ್ಯರ ಪೈಕಿ 311 ಸದಸ್ಯರು ಮಸೂದೆಯ ಪರವಾಗಿ ಹಾಗೂ 80 ಸದಸ್ಯರು ವಿರುದ್ಧವಾಗಿ ಮತಚಲಾವಣೆ ಮಾಡಿದರು.

ಮಸೂದೆಗೆ ಸಂಬಂಧಿಸಿ ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು ಆನಂತರ ಮಧ್ಯರಾತ್ರಿಯಲ್ಲಿ ಅಂಗೀಕಾರವಾಗಿದೆ.

ಮಸೂದೆಯ ಮೇಲೆ ತೀವ್ರ ವಿರೋಧ ವ್ಯಕ್ತಪಡಿಸಿದ ಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರು ಮಸೂದೆಯ ಪ್ರತಿಯನ್ನು ಹರಿದು ಹಾಕಿ ವಿರೋಧ ವ್ಯಕ್ತಪಡಿಸಿದರು.

 

error: Content is protected !!

Join the Group

Join WhatsApp Group