ವಿಶೇಷ ಶಿಕ್ಷಕ ನೇಮಕಾತಿ-ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.10  2019-20ನೇ ಸಾಲಿಗೆ ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಪ್ರೌಢ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ/ವಿಶೇಷ ಬಿ.ಇಡಿ ವಿದ್ಯಾರ್ಹತೆ ಹಾಗೂ ಆರ್.ಸಿ.ಐ. ಪ್ರಮಾಣ ಪತ್ರ ಹೊಂದಿರುವ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.

ಸೂಕ್ತ ದಾಖಲೆಯೊಂದಿಗೆ ಸಮಗ್ರ ಶಿಕ್ಷಣ ಕರ್ನಾಟಕ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ, ಮಂಗಳೂರು, ಜಿಲ್ಲಾ ಕಚೇರಿಗೆ ಡಿಸೆಂಬರ್ 12ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2452100 ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು(ಆ) ಹಾಗೂ ಪದನಿಮಿತ್ತ, ಜಿಲ್ಲಾ ಸಮನ್ವಯಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read   ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!  

error: Content is protected !!
Scroll to Top