ತುಳುಭವನದ ಕಾಮಗಾರಿಗೆ ರೂ.3.60 ಕೋಟಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12   ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತುಳುಭವನದ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳ್ಳಲು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ರೂ.3.60 ಕೋಟಿ ಅನುದಾನ ಬಿಡುಗಡೆ ಆಗಿದೆ.

ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸಿ.ಟಿ. ರವಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್ ಧನ್ಯವಾದಗಳನ್ನು ತಿಳಿಸಿರುತ್ತಾರೆ.

Also Read  ಪುತ್ತೂರು: ಬೈಕ್ ಹಾಗೂ ಓಮ್ನಿ ಕಾರಿನ ನಡುವೆ ಭೀಕರ ಅಪಘಾತ ➤ ತಂದೆ ಮೃತ್ಯು, ಮಗ ಗಂಭೀರ

error: Content is protected !!
Scroll to Top