ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ 

ಹೊಸದಿಲ್ಲಿ, ಡಿ.13: ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್  ಅಂಕಿತ  ನೀಡಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ.

ಸರ್ಕಾರದ ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾಗುವ ಮೂಲಕ ಕಾಯ್ದೆ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ. ಈ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕಾರ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನಗಳಿಂದ ಧಾರ್ಮಿಕ ಕಿರುಕುಳ ಅನುಭವಿಸಿ ಅಲ್ಲಿ ಬದುಕಲು ಸಾಧ್ಯವಾಗದೆ ಭಾರತಕ್ಕೆ ಆಶ್ರಯ ಬಯಸಿ ಡಿಸೆಂಬರ್ 31, 2014ರವರೆಗೆ ಬಂದ ಹಿಂದೂ, ಸಿಖ್, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವ ನೀಡುವುದಾಗಿದೆ. ಇದರಿಂದ ಅವರು ಅಕ್ರಮ ವಲಸಿಗರು ಎನಿಸುವುದಿಲ್ಲ. ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಕಳೆದ ಸೋಮವಾರ ಲೋಕಸಭೆಯಲ್ಲಿ ಬುಧವಾರ ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು.

Also Read  ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ.

error: Content is protected !!
Scroll to Top