ಮಂಗಳೂರು: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13: ರೈಲು ಢಿಕ್ಕಿ ಹೊಡೆದು, ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತೊಕ್ಕೊಟ್ಟು ಕಾಪಿಕಾಡ್ ನಲ್ಲಿ ನಡೆದಿದೆ.

 

ಮೃತರನ್ನು  ಕಾಪಿಕಾಡು ನಿವಾಸಿ ರತನ್ ಕುಮಾರ್ (40) ಎಂದು ಗುರುತಿಸಲಾಗಿದೆ. ಅವರು ನಗರದಲ್ಲಿ 42 ನಂಬರ್ ನ ಬಸ್ಸಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು  ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!

Join the Group

Join WhatsApp Group