ಬಸ್- ಟ್ರ್ಯಾಕ್ಟರ್ ಢಿಕ್ಕಿ: 15 ಕ್ಕೂ ಅಧಿಕ ಮಂದಿಗೆ ಗಾಯ



(ನ್ಯೂಸ್ ಕಡಬ) newskadaba.com ಡಿ.15. ಚಿಕ್ಕ ಬಳ್ಳಾಪುರ. ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು 15ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಹಳ್ಳಿ ಸಮೀಪ ಶನಿವಾರ ತಡರಾತ್ರಿ ನಡೆದಿದೆ.







ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಅಪಘಾತಕ್ಕೆ ಬಸ್ ಮುಂಭಾಗ ಜಖಂಗೊಂಡಿದ್ದು, ಘಟನಾ ಸ್ಥಳಕ್ಕೆ ಚಿಂತಾಮಣಿ ಆಗಮಿಸಿದ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top