ಕಡಬ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಅಡಿಕೆ ತೆಗೆಯಲೆಂದು ಅಡಿಕೆ ಮರಕ್ಕೆ ಏರಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ಎಂಬಲ್ಲಿ ಬುಧವಾರದಂದು ನಡೆದಿದೆ.

ಮೃತ ವ್ಯಕ್ತಿಯನ್ನು ದೊಡ್ಡಕೊಪ್ಪ ನಿವಾಸಿ ರುಕ್ಮಯ್ಯ ಕುಂಬಾರ(54) ಎಂದು ಗುರುತಿಸಲಾಗಿದೆ. ಮೃತರು ಬುಧವಾರದಂದು ತನ್ನ ತೋಟದಲ್ಲಿ ಅಡಿಕೆ ಮರಕ್ಕೆ ಏರಿದ್ದಾಗ ಆಯತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಲಾಯಿತು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ.

error: Content is protected !!

Join the Group

Join WhatsApp Group