ನಾಳೆ (ಡಿ.20) ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ಮಸೂದೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪೊಲೀಸ್ ಗುಂಡಿಗೆ ಇಬ್ಬರು ಬಲಿಯಾಗಿದ್ದು, ಹಲವು ಪ್ರತಿಭಟನಾಕಾರರು ಹಾಗೂ ಪೊಲೀಸರು ಗಾಯಗೊಂಡ ಕಾರಣ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಳೆ (ಡಿಸೆಂಬರ್ 20) ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲಾದ್ಯಂತ ಎಲ್ಲಾ ಶಾಲೆ ಕಾಲೇಜುಗಳಿಗೆ, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.

Also Read  SDPI ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ - ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ ಆಯ್ಕೆ

error: Content is protected !!
Scroll to Top