(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳ್ಳಲಿದೆ.
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಕೋಮು ಪ್ರಚೋದಕ ಸಂದೇಶಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.