ಮಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿರುವುದರಿಂದ ಗೋಲಿಬಾರ್: ಸಿಎಂ

ಮಂಗಳೂರು, ಡಿ.21: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪಕ್ಕೆ ತಿರುಗಿದ್ದು, ಪರಿಸ್ಥಿತಿ ಪೊಲೀಸರ ಕೈಮೀರಿತ್ತು. ಇದರಿಂದ ಗೋಲಿಬಾರ್ ಅನಿವಾರ್ಯವಾಗಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Nk Kukke

ಅವರು ನಗರದ ಸರ್ಕಿಟ್ ಹೌಸ್ ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಗೋಲಿಬಾರ್‌ನಲ್ಲಿ ಮೃತರಾದವರ ಕುಟುಂಬಗಳಿಗೆ ಜಿಲ್ಲಾಧಿಕಾರಿಗಳು ಪರಿಹಾರ ಘೋಷಿಸುತ್ತಾರೆ ಎಂದರು. ನಗರದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಇಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ತೆರವು ಮಾಡಲಾಗುವುದು. ರವಿವಾರ ರಾತ್ರಿ ಮಾತ್ರ ಕರ್ಫ್ಯೂ ಇದ್ದು, ಸೋಮವಾರದಿಂದ ಸಂಪೂರ್ಣ ತೆರವು ಮಾಡಲಾಗುವುದು ಎಂದರು.

Also Read  ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ

error: Content is protected !!
Scroll to Top