ಜಿಲ್ಲಾ ಮಟ್ಟದ ಬಾಸ್ಕೆಟ್‍ ಬಾಲ್ ಆಯ್ಕೆ ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.27   2019-20ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಬಾಸ್ಕೆಟ್‍ಬಾಲ್ ಪಂದ್ಯಾವಳಿಯು ಜನವರಿ 18 ರಿಂದ 21 ರವರೆಗೆ ಪಂಜಾಬ್‍ನಲ್ಲಿ ನಡೆಯಲಿದ್ದು, ಡಿಸೆಂಬರ್ 30 ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಬಾಸ್ಕೆಟ್‍ಬಾಲ್ ತಂಡದ ಆಯ್ಕೆ ಪ್ರಕ್ರಿಯೆಗೆ ರಾಜ್ಯ ಸರಕಾರಿ ನೌಕರರ ಪುರುಷರ ಬಾಸ್ಕೆಟ್‍ಬಾಲ್ ತಂಡವನ್ನು ಜಿಲ್ಲಾ ಮಟ್ಟದಿಂದ ಆಯ್ಕೆ ಮಾಡಿ ಕಳುಹಿಸಿಕೊಡುವಂತೆ ಸೂಚಿಸಲಾಗಿದೆ.

ಇದಕ್ಕೆ ಪೂರ್ವಭಾವಿಯಾಗಿ ಡಿಸೆಂಬರ್ 28 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಬಾಸ್ಕೆಟ್‍ಬಾಲ್ (ಹೊರಾಂಗಣ) ಅಂಕಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಪುರುಷರ ಬಾಸ್ಕೆಟ್‍ಬಾಲ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರಾಜ್ಯ ಸರಕಾರಿ ಖಾಯಂ ನೌಕರರು (ಪುರುಷರು) ಭಾಗವಹಿಸಬಹುದಾಗಿದೆ. ಭಾಗವಹಿಸುವ ಕ್ರೀಡಾಪಟುಗಳು ಸರಕಾರಿ ಇಲಾಖೆಯಲ್ಲಿ ಖಾಯಂ ನೌಕರರಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ತಮ್ಮ ಇಲಾಖಾ ಮುಖ್ಯಸ್ಥರಿಂದ ದೃಢೀಕರಿಸಿದ ಗುರುತಿನ ಚೀಟಿಯನ್ನು ಪಡೆದುಕೊಂಡು ಡಿಸೆಂಬರ್ 28 ರಂದು ಬೆಳಿಗ್ಗೆ 9 ಗಂಟೆಗೆ  ಮಂಗಳಾ ಕ್ರೀಡಾಂಗಣದ ಬಾಸ್ಕೆಟ್‍ಬಾಲ್ ಅಂಕಣದಲ್ಲಿ ಹಾಜರಾಗಬೇಕು ಎಂದು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ. ಕ. ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ

Nk Kukke

error: Content is protected !!
Scroll to Top