ಮಂಗಳೂರು, ಜ.8: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಕರೆ ಕೊಟ್ಟಿದ ಭಾರತ ಬಂದ್‌ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಖಾಸಗಿ ಮತ್ತು ಸರಕಾರಿ ಬಸ್ ಗಳು, ಆಟೋಗಳು ಎಂದಿನಂತೆ ಓಡಾಡುತ್ತಿವೆ. ಜನಜೀವನದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಕೇರಳದಲ್ಲಿ ಬಂದ್ ಗೆ ಬೆಂಬಲ ನೀಡಿರುವ ಕಾರಣ ಕಾಸರಗೋಡಿಗೆ ಹೋಗುವ ಬಸ್ ಗಳು ಮಂಗಳೂರಿನಲ್ಲಿಯೇ ಮೊಕ್ಕಾಂ ಹೂಡಿವೆ. ಯಾವುದೇ ಬಸ್ ಗಳು ಕೇರಳ ರಾಜ್ಯಕ್ಕೆ ಸಂಚರಿಸುತ್ತಿಲ್ಲ.