ಜ.10 ರಂದು ಕಾನೂನು ಅರಿವು ಕಾರ್ಯಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಪರಿಶಿಷ್ಟ  ಜಾತಿ ಮತ್ತು ಪಂಗಡಗಳ ಸಂಘ. ದ.ಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ & ನಿಯಂತ್ರಣ) ಕಾಯ್ದೆ-1986ರಡಿ ಕಾನೂನು ಅರಿವು ಕಾರ್ಯಗಾರ ಜನವರಿ 10 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಕಡ್ಲೂರು ಸತ್ಯನಾರಾಯಣಾಚಾರ್ಯ ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Also Read  ಪುತ್ತೂರು: ಎರಡನೇ ದಿನವೂ ರಿಕ್ಕಿ ರೈಯವರ ಡ್ರಗ್ಸ್ ಕೇಸು ವಿಚಾರಣೆ

error: Content is protected !!