ಗ್ರಾಪಂ ಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು, ಜ.11: ರಾಜ್ಯದ ಕೆಲವು ಗ್ರಾಮ ಪಂಚಾಯತ್ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ.

ಎಪ್ರಿಲ್ 5ರಂದು ಮೊದಲ ಹಂತದ ಮತದಾನ ಮತ್ತು ಎಪ್ರಿಲ್ 9ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮೈಸೂರು, ಮಂಡ್ಯ, ಮಡಿಕೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಗ್ರಾಮ ಪಂಚಾಯತ್ ಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಎಪ್ರಿಲ್ 9ರಂದು ಚುನಾವಣೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಈ ಬಾರಿಯೂ ಗ್ರಾಮ ಪಂಚಾಯತ್ ಗಳಿಗೆ ಇ.ವಿ.ಎಂ ಬಳಸಿ ಚುನಾವಣೆ ನಡೆಯಲಿದೆ. ಈ ಬಾರಿಯೂ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.

Also Read  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ಗೆ ಆದೇಶ

error: Content is protected !!
Scroll to Top