ಮೂಡುಬಿದಿರೆ: ಬಸ್ ಢಿಕ್ಕಿ ➤ ಯುವ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜ.13. ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ಮೂಡುಬಿದಿರೆಯ ಕೆಸರುಗದ್ದೆ ಬಳಿ ಭಾನುವಾರದಂದು ನಡೆದಿದೆ.

ಮೃತರನ್ನು ಕೇರಳದ ಕೊಲ್ಲಂ ನಿವಾಸಿ, ಮೂಡುಬಿದಿರೆ ಅಳ್ವಾಸ್ ಕಾಲೇಜಿನ ಯುವ ವೈದ್ಯ ಡಾ. ಕೃಷ್ಣಾನಂದ(24) ಎಂದು ಗುರುತಿಸಲಾಗಿದೆ. ಕಾರ್ಕಳದಲ್ಲಿ ನಡೆಯಲಿದ್ದ ವೈದ್ಯಕೀಯ ಶಿಬಿರದಲ್ಲಿ ಪಾಲ್ಗೊಳ್ಳಲೆಂದು ಭಾನುವಾರ ಮೂಡುಬಿದಿರೆಯಿಂದ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕೆಸರುಗದ್ದೆ ಎಂಬಲ್ಲಿ ಖಾಸಗಿ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್‍ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತದಿಂದ ವೈದ್ಯ ರಸ್ತೆಗೆ ಬಿದ್ದಿದ್ದು, ಈ ವೇಳೆ ಬಸ್ಸಿನ ಹಿಂಬದಿ ಚಕ್ರ ಅವರ ತಲೆಯ ಮೇಲೆ ಹರಿದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಬಸ್ ಚಾಲಕನ ವಿರುದ್ಧ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top