ಬೆಳ್ಳಾರೆ: ಟೆಂಪೊ – ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.14. ದ್ವಿಚಕ್ರ ವಾಹನ ಹಾಗೂ ಪ್ರಯಾಣಿಕರ ಟೂರಿಸ್ಟ್ ಟೆಂಪೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಾವಿನ ಮೂಲೆ ಎಂಬಲ್ಲಿ ಮಂಗಳವಾರದಂದು ಸಂಭವಿಸಿದೆ.

ಮೃತ ಸವಾರನನ್ನು ಸುಳ್ಯ ತಾಲೂಕು ಕೊಲ್ಲಮೊಗರು ಗ್ರಾಮದ ಚಿದಾನಂದ(40) ಎಂದು ಗುರುತಿಸಲಾಗಿದೆ. ಮೃತರು ತನ್ಮ ದ್ವಿಚಕ್ರ ವಾಹನದಲ್ಲಿ ಬೆಳ್ಳಾರೆ – ಸುಳ್ಯ ಸಾರ್ವಜನಿಕ ರಸ್ತೆಯಲ್ಲಿ ಸೋಣಂಗೇರಿ ಕಡೆಯಿಂದ ಬೆಳ್ಳಾರೆ ಕಡೆಗೆ ಬರುತ್ತಿದ್ದ ವೇಳೆ ಕಾವಿನ ಮೂಲೆ ಎಂಬಲ್ಲಿ ಪ್ರಯಾಣಿಕರ ಟೂರಿಸ್ಟ್ ಟೆಂಪೋವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಿದಾನಂದರ ತಲೆಗೆ ಟೆಂಪೋದ ಹಿಂಬದಿ ಚಕ್ರ ತಾಗಿ ತೀವ್ರತರವಾದ ರಕ್ತಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸಹ ಸವಾರ ವಿನೀತ್ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ವಿಶ್ವವಿದ್ಯಾನಿಲಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ - ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಲಿರುವ ನಟ ವಿಜಯ್

error: Content is protected !!
Scroll to Top