ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18   ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 3 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‍ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ ದಿನ.





Nk Kukke

ಅಂಗನವಾಡಿ ಸಹಾಯಕಿ ಹುದ್ದೆ ಖಾಲಿ ಇರುವ ಅಂಗನವಾಡಿ ಕೇಂದ್ರಗಳು: ಪೆರ್ನೆ ಗ್ರಾಮ ಪಂಚಾಯತ್ ವ್ಯಾಪ್ತಿಯ, ಪೆರ್ನೆ ಅಂಗನವಾಡಿ ಕೇಂದ್ರ, ಅಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ  ನೆಕ್ಕಿತಪುಣಿ ಅಂಗನವಾಡಿ ಕೇಂದ್ರ, ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುರಿಬೈಲು ಅಂಗನವಾಡಿ ಕೇಂದ್ರ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ರಿಹಾ ಪ್ಲಾನೆಟ್, ಚಂದ್ರನಾಥ ಬಸದಿ ಎದುರು, ಪುತ್ತೂರು ರಸ್ತೆ ವಿಟ್ಲ ದೂರವಾಣಿ ಸಂಖ್ಯೆ 08255-238080 ಸಂಪರ್ಕಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top