ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2019ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.


ಆಯ್ಕೆಯಾದ ಪುಸ್ತಕಕ್ಕೆ ರೂ.25,000 ಗಳ ಬಹುಮಾನವನ್ನು ನೀಡಲಾಗುತ್ತದೆ. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಆಹ್ವಾನಿಸಲಾಗಿದ್ದು,  ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು, ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು. ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560 002, ಇವರಿಗೆ  ಫೆಬ್ರವರಿ 07ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22113146 ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group