ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ

ಮಂಗಳೂರು, ಜ.20: ಮಂಗಳೂರು ಅಂತಾಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್‌ ಪತ್ತೆಯಾಗಿದ್ದು, ಈ ಬ್ಯಾಗ್ ನಲ್ಲಿ ಸಜೀವ ಬಾಂಬ್ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

Nk Kukke

ಆಟೋದಲ್ಲಿ ಬಂದಂತಹ ಇಬ್ಬರು ವ್ಯಕ್ತಿಗಳು ಬ್ಯಾಗ್ ಗನ್ನು ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಿಸಿ ಟಿವಿ ಪರಿಶೀಲನೆ ವೇಳೆ ಸುಮಾರು 9.45 ರ ವೇಳೆಗೆ ಆಟೋದಲ್ಲಿ ಬಂದಂತಹ ಇಬ್ಬರು ವ್ಯಕ್ತಿಗಳು ಲ್ಯಾಪ್ ಟಾಪ್ ಬ್ಯಾಗ್ ನ್ನು ಅಲ್ಲಿರಿಸಿ ಪರಾರಿಯಾಗಿದ್ದಾರೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿನ ಭದ್ರತಾ ತಪಾಸಣಾ ಗೇಟ್ ಬಳಿ ಬ್ಯಾಗ್ ಪತ್ತೆಯಾಗಿರುವುದನ್ನು ಗಮನಿಸಿದ ಕ್ವಿಕ್ ರಿಯಕ್ಷನ್ ಟೀಂ ನವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಅಧಿಕಾರಿಗಳು ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಆಗಮಿಸಿ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಸದ್ಯದಲ್ಲೇ ಬಾಂಬ್ ನಿಷ್ಕ್ರೀಯಗೊಳಿಸುವತ್ತ ತಜ್ಞರು ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Also Read  ಉಪ್ಪಿನಂಗಡಿ: ಅಂಗನವಾಡಿ ಕೇಂದ್ರದ ಬಳಿ ಅಪಾಯಕಾರಿ ವಿದ್ಯುತ್ ತಂತಿ ಸಂಪರ್ಕ ➤ ಎಸ್.ಡಿ.ಪಿ.ಐ ಪೆರಿಯಡ್ಕ ಬ್ರಾಂಚ್ ವತಿಯಿಂದ ಮೆಸ್ಕಾಂ ಮನವಿ

ಪ್ರಯಾಣಿಕರ ಸುರಕ್ಷಿತೆಯ ದೃಷ್ಟಿಯಿಂದ ವಿಮಾನ ನಿಲ್ದಾಣಕ್ಕೆ ಬರುವ ದಾರಿಯನ್ನು ಬದಲಾವಣೆ ಮಾಡಲಾಗಿದೆ.ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವಿಮಾನ ಸಂಚಾರ ಎಂದಿನಂತೆ ನಡೆಯುತ್ತಿದೆ ಎನ್ನಲಾಗಿದೆ.

 

error: Content is protected !!
Scroll to Top