ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಇಟ್ಟ ಶಂಕಿತ ವ್ಯಕ್ತಿಯ ಚಿತ್ರ ಬಿಡುಗಡೆ

ಮಂಗಳೂರು, ಜ 20: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಅಮಾನಸ್ಪದ ಬ್ಯಾಗೊಂದು ಪತ್ತೆಯಾಗಿದ್ದು, ಬ್ಯಾಗಿಟ್ಟ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.

ಶಂಕಿತ ವ್ಯಕ್ತಿ ಆಟೊರಿಕ್ಷಾ ಮೂಲಕ ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದಲ್ಲಿ ಬ್ಯಾಗ್ ಇಟ್ಟು ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅಧಿಕೃತವಾಗಿ ಆಟೊರಿಕ್ಷಾ ಮತ್ತು ಶಂಕಿತ ವ್ಯಕ್ತಿಯ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು ಹಾಗೂ ಹುಬ್ಬಳ್ಳಿ ವಿಮಾಣ ನಿಲ್ದಾಣದಲ್ಲೂ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Also Read  ಬೈಕ್ ಅಪಘಾತ: ಓರ್ವ ಗಂಭೀರ ಗಾಯ

‘ಬಾಂಬ್’ ಸ್ಫೋಟಿಸಿದ ಸಿಬ್ಬಂದಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್‌ನಲ್ಲಿ ಬಾಂಬ್ ಪತ್ತೆಯಾಗಿದೆ ಎನ್ನಲಾಗಿದ್ದ ಬ್ಯಾಗ್‌ನ್ನು ಬಾಂಬ್ ನಿಷ್ಕ್ರೀಯ ತಂಡ ಕೆಂಜಾರು ನಿರ್ಜನ ಪ್ರದೇಶದಲ್ಲಿ ಸ್ಫೋಟಿಸಿದ್ದಾರೆ.

error: Content is protected !!
Scroll to Top