ಚಲಿಸುತ್ತಿದ್ದ ವೋಲ್ವೋ ಬಸ್‌ನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು



ಚಿತ್ರದುರ್ಗ, ಜ.21: ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ವೋಲ್ವೋ ಬಸ್ಸೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಗುಯಿಲಾಳು ಟೋಲ್ ಬಳಿಯ ಗಿಡ್ಡೋಬನಹಳ್ಳಿ ಬಳಿ ನಡೆದಿದೆ.





ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿ ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ. ಬಸ್ಸು ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕೆ ಎಸ್ ಅರ್ ಟಿಸಿ ಹವಾ ನಿಯಂತ್ರಿತ ಬಸ್ ಇದಾಗಿದ್ದು, ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದರು. ಕೂಡಲೇ ಎಚ್ಚೆತ್ತು ಕೊಂಡ ಕಾರಣ ಯಾವುದೇ ಅಪಾಯವಾಗದೇ ಎಲ್ಲರೂ ಪಾರಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.






error: Content is protected !!
Scroll to Top