ಮಂಗಳೂರು ಸ್ಫೋಟಕ ಆರೋಪಿ ಮುಸ್ಲಿಮ್ ಆಗಿದ್ದರೆ ಕತೆಯೇ ಬೇರೆಯಾಗುತ್ತಿತ್ತು: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜ.23: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾದ ಪ್ರಕರಣದಲ್ಲಿ ಶರಣಾಗತನಾಗಿರುವ ವ್ಯಕ್ತಿ ಮುಸ್ಲಿಮ್ ಆಗಿದ್ದಿದ್ದರೆ ಕತೆಯೇ ಮುಗಿದುಬಿಡುತ್ತಿತ್ತು. ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಮಾತನಾಡುತ್ತಿದ್ದರು. ಇಂದು ಯಾರೊಬ್ಬರ ಸುದ್ದಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಅಧಿಕಾರಿಗಳು ಸರಕಾರವನ್ನು ಮೆಚ್ಚಿಸಲು ಏನೇನೋ ಮಾಡುತ್ತಿರುವಂತಿದೆ, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಿದ್ದರೆ ರಾಜ್ಯದಲ್ಲಿ ಹೂಡಿಕೆ ಮಾಡಲು ಯಾರು ಮುಂದೆ ಬರುತ್ತಾರೆ ಎಂದು ಅವರು ಹೇಳಿದರು.

Also Read  ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್

error: Content is protected !!
Scroll to Top