ಬೆಳ್ಳಾರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ಬಂಧನ ➤ ಆರೋಪಿಯ ಗೂಡಂಗಡಿಗೆ ಬೆಂಕಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ.15. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಯು 5ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಹಿನ್ನೆಲೆಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ನಡುವೆ ಅಬ್ದುಲ್ಲ ಎಂಬವರ ಗೂಡಂಗಡಿಗೆ ಬೆಂಕಿ ತಗುಲಿ‌ದ್ದು, ಅಂಗಡಿ ಸಂಪೂರ್ಣ ಭಸ್ಮವಾದ ಘಟನೆ ಶನಿವಾರ ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ. ಯಾರೋ ಕಿಡಿಗೇಡಿಗಳು ಬೆಂಕಿ‌ ಕೊಟ್ಟಿರಬಹುದೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗಲಿರಬಹುದೇ ಎಂಬುದು ಇನ್ನಷ್ಟೇ ಬೆಳಕಿಗೆ ಬರಬೇಕಾಗಿದೆ.

Also Read  ಮಾಣಿ: ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಮಹಿಳೆ ಹಾಗೂ ಮಗು ಗಂಭೀರ

error: Content is protected !!
Scroll to Top