ಬೈಂದೂರು: ಭೂ ಕುಸಿತದಿಂದ ಕೊಳವೆ ಬಾವಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ

ಬೈಂದೂರು, ಫೆ.16: ಬೈಂದೂರು ತಾಲೂಕಿನ ಮರವಂತೆಯಲ್ಲಿ ಭೂ ಕುಸಿತದಲ್ಲಿ ಭಾನುವಾರ ಕೊಳವೆ ಬಾವಿಯೊಳಗೆ ಸಿಲುಕಿದ್ದ ವ್ಯಕ್ತಿಯನ್ನು 6 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದೆ.

ಭೂ ಕುಸಿತಕ್ಕೆ ಸಿಲುಕಿದ ರೋಹಿತ್ ಖಾರ್ವಿಯವರನ್ನು ಅಗ್ನಿಶಾಮಕ ದಳ ಸಿಬ್ಬಂದಿ ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾವಿಯೊಳಗಿಂದ ಹೊರತೆಗೆಯಲಾಗಿದೆ.

ಬಳಿಕ ವೈದ್ಯರು ಆಗಮಿಸಿ ರೋಹಿತ್ ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ರೋಹಿತ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕೊಳವೆಬಾವಿ ಕೊರೆಯುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಅದರ ಸುತ್ತ ಭಾರೀ ಆಳಕ್ಕೆ ಭೂಕುಸಿತ ಉಂಟಾಗಿದ್ದು, ಈ ಸಂದರ್ಭ ಸುಮಾರು 15 ಅಡಿಯಷ್ಟು ಮಣ್ಣು ಕುಸಿದಿದ್ದು, ಸ್ಥಳದಲ್ಲಿದ್ದ ರೋಹಿತ್ ಖಾರ್ವಿ ಅದರಲ್ಲಿ ಸಿಲುಕಿಕೊಂಡಿದ್ದರು.

error: Content is protected !!
Scroll to Top