ಕೆಎಸ್ಸಾರ್ಟಿಸಿ-ಕಾರು ಢಿಕ್ಕಿ: ಅಪಾಯದಿಂದ ಪಾರಾದ ಚಿತ್ರದುರ್ಗ ಡಿಸಿ

ಚಿತ್ರದುರ್ಗ, ಫೆ.18: ಚಿತ್ರದುರ್ಗ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರಕಾರಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಇಲ್ಲಿನ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ನಡೆದಿದೆ.

ಕಾರಿನ ಏರ್‌ಬ್ಯಾಗ್ ತೆರೆದುಕೊಂಡ ಪರಿಣಾಮ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಚಾಲಕ ಮನ್ಸೂರ್ ಹಾಗೂ ಗನ್ ಮ್ಯಾನ್ ನವೀನ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿನೋತ್ ಪ್ರಿಯಾ ಚಿತ್ರದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರ ಕೈ ಬೆರಳಿಗೆ ಚಿಕ್ಕ ಗಾಯವಾಗಿದ್ದು, ಚಿಕಿತ್ಸೆ ಪಡೆದು ಬಳಿಕ ಬೇರೆ ಕಾರಿನಲ್ಲಿ ಚಿತ್ರದುರ್ಗಕ್ಕೆ ವಾಪಸಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

error: Content is protected !!
Scroll to Top