ದಿಲ್ಲಿ ಹಿಂಸಾಚಾರ: ಮೃತರ ಸಂಖ್ಯೆ 21ಕ್ಕೇರಿಕೆ

  • ಚರಂಡಿಯಲ್ಲಿ ಗುಪ್ತಚಾರ ಇಲಾಖೆಯ ಸಿಬ್ಬಂದಿಯ ಶವ ಪತ್ತೆ

ಹೊಸದಿಲ್ಲಿ, ಫೆ.26: ಈಶಾನ್ಯ ದಿಲ್ಲಿಯಲ್ಲಿ ಹಿಂಸಾಚಾರ ಭುಗಿಲೆದಿದ್ದು, ಈಗಾಗಲೇ 21ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ಧಾರೆ. ಈ ನಡುವೆ ಚಾಂದ್ ಬಾಗ್ ಪ್ರದೇಶದ ಚರಂಡಿಯೊಂದರಲ್ಲಿ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರ ಶವ ಪತ್ತೆಯಾಗಿದೆ.

ಮೃತ ಅಧಿಕಾರಿಯನ್ನು ಅಂಕಿತ್ ಶರ್ಮಾ (26) ಎಂದು ಗುರುತಿಸಲಾಗಿದೆ. ಅಂಕಿತ್ ಶರ್ಮಾ ಕರ್ತವ್ಯ ಮುಗಿಸಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭ ಅವರ ಮೇಲೆ ಗುಂಪೊಂದು ದಾಳಿ ನಡೆಸಿದೆ. ಈ ಸಂದರ್ಭ ಗುಂಡಿಕ್ಕಿ ಹತ್ಯೆಗೈದು ಚರಂಡಿಗೆ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ.

Also Read  ದೇಶದ ಭದ್ರತೆಗೆ ಧಕ್ಕೆ ತರುವ 14 ಮೊಬೈಲ್ ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ಅವರ ಶವವನ್ನು ಬುಧವಾರ ಮೇಲಕ್ಕೆತ್ತಲಾಗಿದೆ. ಗುಪ್ತಚರ ಮಂಡಳಿಯಲ್ಲಿ ತರಬೇತಿಗೆ ನಿಯುಕ್ತರಾಗಿ ಯುವ ಅಧಿಕಾರಿ ಅಂಕಿತ್ ಶರ್ಮಾ ಅವರ ದೇಹದಲ್ಲಿ ಗುಂಡೇಟಿನ ಗಾಯವಿದ್ದು, ಮರಣೋತ್ತರ ಪರೀಕ್ಷೆಗಾಗಿ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅವರು 2017ರಲ್ಲಿ ಕರ್ತವ್ಯಕ್ಕೆ ಸೇರಿದ್ದರು.

error: Content is protected !!
Scroll to Top