ಧರ್ಮಸ್ಥಳ: ನದಿಯಲ್ಲಿ ಮುಳುಗಿ ಕಾರ್ಮಿಕ ಮೃತ್ಯು

ಬೆಳ್ತಂಗಡಿ, ಮಾ.6: ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸುಹಾಸ್ ಎಂದು ಗುರುತಿಸಲಾಗಿದೆ.

ಧರ್ಮಸ್ಥಳದ ಶಿಶಿಲ ಸಮೀಪ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯಲು ತೆರಳಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಸಂದೀಪ್ ಗೌಡ ಎಂಬವರಿಗೆ ಸೇರಿದ ಟಿಪ್ಪರ್‌ನಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಟಿಪ್ಪರ್‌ನಲ್ಲಿ ತುಂಬಿಸಲೆಂದು ನದಿಯಿಂದ ಮರಳು ತೆಗೆಯುತ್ತಿದ್ದ ಸಂದರ್ಭ ಸುಹಾಸ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group