ಮಂಗಳೂರು ಹಿಂಸಾಚಾರ, ಗೋಲಿಬಾರ್ ಪ್ರಕರಣ: 21 ಮಂದಿಯ ಜಾಮೀನು ರದ್ದುಗೊಳಿಸಿದ ಸುಪ್ರೀಂ

ಮಂಗಳೂರು, ಮಾ.6: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ, ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ.

ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಪುರಾವೆ ಇದೆ ಎಂದು ರಾಜ್ಯದ ಪರ ವಾದ ಮಂಡಿಸುವ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಹೀಗೆ ವಾದ ಮಂಡಿಸುತ್ತಿದ್ದಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾ.ಗವಾಯಿ, ನ್ಯಾ.ಸೂರ್ಯಕಾಂತ್ ಹೈ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದರು.

ರಾಜ್ಯ ಹೈಕೋರ್ಟ್ 21 ಆರೋಪಿಗಳಿಗೆ ಕಳೆದ ಇತ್ತೀಚೆಗಷ್ಟೇ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೀಗಾಗಿ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದು ಗೋಲಿಬಾರ್‌ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಈ ಹಿಂಸಾಚಾರಕ್ಕೆ ಕಾರಣವಾಗಿದ್ದ ಎನ್ನಲಾದ 21 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರ ಕ್ರಮ ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

error: Content is protected !!

Join the Group

Join WhatsApp Group