ಮಂಗಳೂರು: ಶಂಕಿತ ಕೊರೊನ ವ್ಯಕ್ತಿ ವೆನ್ಲಾಕ್‌ನಿಂದ ಪರಾರಿ!

ಮಂಗಳೂರು, ಮಾ.9: ಶಂಕಿತ ಕೊರೊನ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದುಬೈನಿಂದ ಆಗಮಿಸಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸೋಮವಾರ ಮಂಗಳೂೂರಿನಲ್ಲಿ ನಡೆದಿದೆ.

ದುಬೈನಿಂದ ಬಂದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ವೇಳೆ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ರವಿವಾರ ರಾತ್ರಿ ನಗರದ ವೆನ್ಲ್ಯಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವಿಶೇಷ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಸದ್ಯ ಆತ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಈತ ಉಳ್ಳಾಲದ ವ್ಯಕ್ತಿಯೆಂದು ವರದಿಯಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

error: Content is protected !!
Scroll to Top