ದುಬೈನಿಂದ ಆಗಮಿಸಿದ ವೇಳೆ ಶಂಕಿತ ಕೊರೋನಾ ವೈರಸ್ ಪತ್ತೆ ಹಿನ್ನೆಲೆ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಪರಾರಿ



(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.09. ಮಹಾಮಾರಿ ಕೊರೋನ ಸೋಂಕು ವಿಶ್ವಾದ್ಯಂತ ಲಕ್ಷಾಂತರ ಜನರಿಗೆ ತಗುಲಿ ಸಾವಿರಾರು ನಾಗರಿಕರ ಮಾರಣಹೋಮಕ್ಕೆ ಕಾರಣವಾಗಿರುವುದರ ನಡುವೆ ದುಬೈನಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೊರೋನ ಸೋಂಕು ತಗುಲಿದ ಶಂಕೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿ ಸೋಮವಾರದಂದು ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ.





ಆಸ್ಪತ್ರೆಗೆ ದಾಖಲಿಸಿರುವ ವ್ಯಕ್ತಿಯ ಹೆಸರನ್ನು ಆರೋಗ್ಯಾಧಿಕಾರಿಗಳು ಬಹಿರಂಗಪಡಿಸಲು ನಿರಾಕರಿಸಿದ್ದರಾದರೂ, ಸೋಮವಾರದಂದು ಶಂಕಿತ ರೋಗಿಯು ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ದುಬೈನಿಂದ ಆಗಮಿಸಿದ ಪ್ರಯಾಣಿಕನಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿತ್ತು.






error: Content is protected !!
Scroll to Top