ರಾಜ್ಯದಲ್ಲಿ ನಾಲ್ವರಿಗೆ ಕೊರೋನ ದೃಢ

ಬೆಂಗಳೂರು, ಮಾ.10: ಮಹಾಮಾರಿ ಕೊರೋನ ವೈರಸ್‌ಗೆ ರಾಜ್ಯದಲ್ಲಿ ನಾಲ್ಕು ಮಂದಿ ಒಳಗಾಗಿರುವುದಾಗಿ ದೃಢಪಟ್ಟಿದೆ.

ಸೋಮವಾರ ಸಂಜೆ ಬೆಂಗಳೂರಿನಲ್ಲಿ ಒಂದು ಪ್ರಕರಣ ಖಚಿತವಾಗಿತ್ತು. ಇದೀಗ ಮತ್ತೆ ಮೂವರಿಗೆ ಈ ಮಾರಣಾಂತಿಕ ಕೊರೋನ ವೈರಸ್ ಖಚಿತವಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿದೆ.

ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

Also Read  ಯುರೋಪ್ ನಿಂದ ನಾಳೆ ವಾಪಸಾಗಲಿರುವ HDK

ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.

error: Content is protected !!
Scroll to Top