ಉಡುಪಿ, ಮಾ.11: ಶಂಕಿತ ಕೊರೋನ ವೃದ್ದೆಯೋರ್ವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೃದ್ದೆಗೆ ಕೊರೋನ ವೈರಸ್ ಇರುವುದು ದೃಢಪಟ್ಟಿಲ್ಲ ಎಂದು ತಿಳಿದುಬಂದಿದೆ.
ವೃದ್ದೆಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂನ ಆಚಾರಪುರದವರು ಎಂದು ತಿಳಿದು ಬಂದಿದೆ. ಕಳೆದ ವಾರ ಸೌದಿಯ ಮಕ್ಕಾಗೆ ತೆರಳಿದ್ದ ಮಹಿಳೆಗೆ ಜ್ವರ, ಕಫ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಗುಣಮುಖರಾದ ಬಳಿಕ ಬೆಂಗಳೂರಿಗೆ ವಾಪಾಸ್ ಆಗಿದ್ದರು. ಅಲ್ಲಿಂದ ಶಿವಮೊಗ್ಗಕ್ಕೆ ತೆರಳಿದ್ದು, ಜ್ವರದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಇದಾದ ಬಳಿಕ ವೃದ್ದೆಗೆ ಕಫ, ಹಾಗೂ ಉಸಿರಾಟದ ತೊಂದರೆ ಕಂಡುಬಂದಿದ್ದು, ವೃದ್ದೆಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ನಿಗಾ ಇರಿಸಲಾಗಿದೆ. ಬೆಂಗಳೂರಿನಿಂದ ತಪಾಸಣಾ ವರದಿ ಇನ್ನಷ್ಟೇ ಬರಬೇಕಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.