ವಿಶೇಷ ಭದ್ರತಾ ವೈಶಿಷ್ಟ್ಯದೊಂದಿಗೆ ಬರುತ್ತಿದೆ 1000 ಹೊಸ ನೋಟು ► ಡಿಸೆಂಬರ್‌ನಲ್ಲಿ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.29. 500 ಮತ್ತು 1000 ರೂ. ನೋಟುಗಳ ನಿಷೇಧದ ನಂತರ ಹೊಸದಾಗಿ 2000, 500, 200 ಮತ್ತು 50 ರೂ.ಗಳನ್ನು ಬಿಡುಗಡೆ ಮಾಡಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೂತನ 1000 ರೂ. ನೋಟನ್ನು ಬಿಡುಗಡೆಗೊಳಿಸುತ್ತಿದೆ.

ಆರ್‍ಬಿಐ ಶೀಘ್ರದಲ್ಲೇ 1 ಸಾವಿರ ರೂ. ನೋಟುಗಳನ್ನು ಮುದ್ರಿಸಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದ್ದು, ಈ ಹೊಸ ನೋಟುಗಳು ಡಿಸೆಂಬರ್ ನಲ್ಲಿ ಚಲಾವಣೆಗೆ ಬರಲಿದೆ ಎಂದು ವರದಿಯಲ್ಲಿ ತಿಳಿಸಿದೆ. ಮೈಸೂರು ಮತ್ತು ಸಾಲ್ಬೋನಿಯಲ್ಲಿರುವ ಮುದ್ರಣ ಘಟಕಗಳಲ್ಲಿ ಈ ಹೊಸ ನೋಟುಗಳು ವಿಶೇಷ ಭದ್ರತಾ ವೈಶಿಷ್ಟ್ಯಗಳೊಂದಿಗೆ ಮುದ್ರಣವಾಗಲಿದೆ ಎನ್ನಲಾಗಿದೆ.

2 ಸಾವಿರ ರೂ. ನೋಟುಗಳ ಚಲಾವಣೆ ಹಂತ ಹಂತವಾಗಿ ಕಡಿಮೆ ಮಾಡುತ್ತಿರುವುದರಿಂದ ಜನರ ವ್ಯವಹಾರಕ್ಕೆ ಸಮಸ್ಯೆ ಆಗದೇ ಇರಲು ಮತ್ತು ಚಿಲ್ಲರೆ ಸಮಸ್ಯೆಯನ್ನು ಕಡಿಮೆ ಮಾಡಲು 200 ರೂ. ನೋಟುಗಳನ್ನು ಬಿಡುಗಡೆ ಮಾಡಿದೆ. ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ಮಾಧ್ಯಮವೊಂದು ಈ ಹಿಂದೆ ವರದಿ ಮಾಡಿತ್ತು. ಮೈಸೂರಿನಲ್ಲಿರುವ ಪ್ರಿಂಟಿಂಗ್ ಪ್ರೆಸ್ ನಲ್ಲಿ ಈಗಾಗಲೇ 2000 ರೂ. ನೋಟ್ ಮುದ್ರಣ ಕಾರ್ಯ ಸ್ಥಗಿತಗೊಂಡಿದ್ದು, ಈ ಹಣಕಾಸು ವರ್ಷದಲ್ಲಿ 2 ಸಾವಿರ ರೂ.ನೋಟುಗಳನ್ನು ಮುದ್ರಿಸುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.

Also Read  200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು

error: Content is protected !!
Scroll to Top