ಅನಂತ್ ನಾಗ್: ಭದ್ರತೆ ಪಡೆಯ ಗುಂಡಿಗೆ ಬಲಿಯಾದ ನಾಲ್ವರು ಉಗ್ರರು

ಜಮ್ಮು, ಮಾ.15: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾನುವಾರ ಬೆಳಿಗ್ಗೆ ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಲಷ್ಕರ್-ಎ-ತೊಯ್ಬೆ (ಎಲ್‌ಇಟಿ) ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ.

ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ, ಜಮ್ಮು- ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಇಂದು ಮುಂಜಾನೆ ಅನಂತ್‌ನಾಗ್‌ನ ವಾಟರಿಗಮ್‌ನಲ್ಲಿ ಆರಂಭಿಸಿದ್ದವು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶೋಧ ಕಾರ್ಯಚರಣೆ ನಡೆದ ಪ್ರದೇಶದಲ್ಲಿ ಎಲ್ಲ ನಿರ್ಗಮನ ಸ್ಥಳಗಳನ್ನು ಮುಚ್ಚಿ, ಮನೆ-ಮನೆಗೆ ತೆರಳಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಭದ್ರತಾ ಪಡೆಗಳು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿದ್ದಾಗ ಅಡಗಿ ಕುಳಿತಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ತೀವ್ರ ಗುಂಡಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

error: Content is protected !!

Join the Group

Join WhatsApp Group