ಕೊರೋನ ಭೀತಿ: ಕಲಬುರಗಿ ಜಿಲ್ಲೆಯಲ್ಲಿ 1 ತಿಂಗಳು ಅಘೋಷಿತ ಬಂದ್

ಕಲಬುರಗಿ, ಮಾ.16: ಮಾರಣಾಂತಿಕ ಕೊರೋನ ಸೋಂಕು ನಿಯಂತ್ರಣಕ್ಕೆ ಕಲಬುರಗಿ ಜಿಲ್ಲೆಯಲ್ಲಿ ಒಂದು ತಿಂಗಳು ಕಾಲ ಅಘೋಷಿತ ಬಂದ್ ಮಾಡುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದ್ದಾರೆ.

ಕೊರೋನ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ ನಾಲ್ವರಲ್ಲಿ ಸೋಂಕು ಲಕ್ಷಣಗಳು ಕಾಣಿಸಿಕೊಂಡಿದ್ದು, ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಾಳೆ ವರದಿ ಬರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾತ್ರ ಹೊರಗಡೆ ಬರುವಂತೆ ಮಾಡಿರುವ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದಾರೆ. ಇದೇ ರೀತಿ ಮುಂದಿನ ದಿಗಳಲ್ಲಿ ಸಾರ್ವಜನಿಕರು ಸ್ಪಂದಿಸಬೇಕು. ಅಗತ್ಯ ವಸ್ತುಗಳಿಗಾಗಿ ಮಾತ್ರ ಜನತೆ ಮನೆಯಿಂದ ಹೊರಬರಬೇಕು. ಅನಗತ್ಯವಾದ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಬೇಕೆಂದು ಮತ್ತೊಮ್ಮೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸಭೆ, ಸಮಾವೇಶ ಹಾಗೂ ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಮನೆಗಳಲ್ಲಿ ಸ್ನೇಹಿತರು ಹಾಗೂ ಕುಟುಂಬಸ್ಥರನ್ನು ಸೇರಿಸಿಕೊಂಡು ಒಟ್ಟಾಗಿ ಮನೆಯಲ್ಲೂ ಪಾರ್ಟಿ ಮಾಡುವುದು ಬೇಡವೆಂದೂ ಅವರು ಎಚ್ಚರಿಸಿದರು.

Also Read  ಅಡ್ಡೂರು ಪ್ರದೇಶವನ್ನು 'ಮಿನಿ ಪಾಕಿಸ್ತಾನ' ಎಂದು ಕರೆದಿರುವ ಭರತ್ ಶೆಟ್ಟಿಯವರ ನಡೆ ಖಂಡನೀಯ- ಎಸ್ಡಿಪಿಐ

ಕೊರೋನ ಸೋಂಕು ಕಲಬುರಗಿ ನಗರಕ್ಕೆ ಮಾತ್ರ ಸೀಮಿತವಲ್ಲ. ವಿದೇಶದಿಂದ ಬಂದವರು ನೇರವಾಗಿ ತಮ್ಮ ಊರುಗಳಿಗೆ ತೆರಳಿದ್ದಾರೆ. ಈಗ ಸೋಂಕು ಕಾಣಿಸಿಕೊಂಡ ಇಬ್ಬರಲ್ಲಿ ಒಬ್ಬರು ಚಿತ್ತಾಪುರ ಹಾಗೂ ಮತ್ತೊಬ್ಬರು ಚಿಂಚೋಳಿಗೆ ಸೇರಿದವರು ಆಗಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲೂ ಎಚ್ಚರ ವಹಿಸಬೇಕಾಗುತ್ತದೆ ಎಂದರು.

ಜಿಲ್ಲಾ ಮಟ್ಟದಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ 12 ಐಸೋಲೇಟೆಡ್ ಹಾಗೂ ಇಎಸ್‌ಐ ಆಸ್ಪತ್ರೆಯಲ್ಲಿ 50 ಐಸೋಲೇಟೆಡ್ ವಾರ್ಡ್ ಮತ್ತು 200 ಕ್ವಾರಂಟೈನ್ ವಾರ್ಡ್ ಸಿದ್ಧಪಡಿಸಲಾಗಿದೆ. ಪ್ರತಿ ತಾಲೂಕಿನ ಕೇಂದ್ರದಲ್ಲಿ ಎರಡರಿಂದ ಐದಕ್ಕೆ ಐಸೋಲೇಟೆಡ್ ವಾರ್ಡ್ ಗಳನ್ನು ಏರಿಸಲಾಗಿದೆ. ವಿದೇಶದಿಂದ ಬಂದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಇದಕ್ಕಾಗಿ 24 ಗಂಟೆ ಸಹಾಯ ವಾಣಿ ಸ್ಥಾಪಿಸಲಾಗಿದೆ. ಸಹಾಯವಾಣಿ ಸಂಖ್ಯೆ 08472 – 278604/ 278677 ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.

Also Read  ನಿಮ್ಮ ಬೈಕಿನ ನಂಬರ್ ಪ್ಲೇಟ್ ನಲ್ಲಿ ಹೆಸರುಗಳಿವೆಯೇ...? ► ಪೊಲೀಸರು ದಂಡ ವಿಧಿಸುವುದಕ್ಕಿಂತ ಮೊದಲು ಎಚ್ಚೆತ್ತುಕೊಳ್ಳಿ

error: Content is protected !!
Scroll to Top