ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿಕೆ

ಬೆಂಗಳೂರು, ಮಾ.16: ವಿಶ್ವದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಏರುತ್ತಿರುವ ನಡುವೆಯೇ ರಾಜ್ಯದಲ್ಲಿಯೂ ಇದೀಗ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇಂದು ಕೂಡಾ ಒಂದು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ 8ಕ್ಕೆ ಏರಿದಂತಾಗಿದೆ.
ಕಲಬುರಗಿಯಲ್ಲಿ ಶನಿವಾರ ಮತ್ತೊಂದು ಪ್ರಕರಣ ಪತ್ತೆಯಾಗುವ ಮೂಲಕ ಕೊರೋನ ಸೋಂಕಿತರ ಸಂಖ್ಯೆ 7ಕ್ಕೆ ಏರಿತ್ತು. ಇದೀಗ 8ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

Also Read  ಮದ್ಯ ಖರೀದಿ ವಯಸ್ಸನ್ನು 21ರಿಂದ 18 ಕ್ಕೆ ಇಳಿಸುವ ನಿರ್ಧಾರದಿಂದ ಹಿಂದೆ ಸರಿದ ಸರಕಾರ

ಅಮೆರಿಕದಿಂದ ಬಂದಿದ್ದ ವ್ಯಕ್ತಿಯ ಸಹೋದ್ಯೋಗಿಯನ್ನು ಪರೀಕ್ಷಿಸಿದಾಗ ಕೊರೋನ ವೈರಸ್ ಸೋಂಕು ಪಾಸಿಟಿವ್ ವರದಿ ಬಂದಿದ್ದು, ಆ ವ್ಯಕ್ತಿಯನ್ನು ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವರಿಸಿದರು.

error: Content is protected !!
Scroll to Top