(ನ್ಯೂಸ್ ಕಡಬ) newskadaba.com ಕಡಬ, ಆ.29, ತ್ರಿವಳಿ ತಲಾಖ್ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದುನ್ನು ಸ್ವಾಗತಿಸಿರುವ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕಡಬ ಶಕ್ತಿಕೇಂದ್ರದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಕೋಡಿಂಬಾಳದಲ್ಲಿ ಸಂಭ್ರಮಾಚರಣೆ ನಡೆಸಿದರು.

ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ನಲ್ಲೂರಾಯ ಅವರು ಮಾತನಾಡಿ ಕೋರ್ಟ್ನ ತೀರ್ಪು ಕೇವಲ ಅಲ್ಪ ಸಂಖ್ಯಾತ ಹೆಣ್ಣು ಮಕ್ಕಳ ಗೆಲುವು ಮಾತ್ರವಲ್ಲದೇ ಮಹಿಳಾ ಸಬಲೀಕರಣಕ್ಕೆ ನೀಡಿದ ಬಲುದೊಡ್ಡ ಕೊಡುಗೆ ಎಂದರು.

ಮಹಿಳಾ ಮೋರ್ಚಾದ ಸುಳ್ಯ ಮಂಡಲ ಸಮಿತಿ ಕಾರ್ಯದರ್ಶಿ ಜಯಂತಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಭಾಗೀರಥಿ ಮುರುಳ್ಯ, ಜಿಲ್ಲಾ ಮಹಿಳಾ ಮೋರ್ಚಾ ಸದಸ್ಯರಾದ ಸರೋಜಿನಿ ಜಯಪ್ರಕಾಶ, ಸರೋಜಿನಿ, ಕಡಬ ಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶಶಿಪ್ರಭಾ ಎಂ. ಶೆಟ್ಟಿ, ತಾಲೂಕು ಮಹಿಳಾ ಮೋರ್ಚಾ ಕಾರ್ಯದರ್ಶಿ ಶೋಭಾ ಜಯಾನಂದ, ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್ ಗೌಡ, ಸುಳ್ಯ ಕ್ಷೇತ್ರದ ವಿವಿಧ ಗ್ರಾ.ಪಂ.ಗಳ ಮಹಿಳಾ ಸದಸ್ಯರು, ಶಕ್ತಿ ಕೇಂದ್ರಗಳ ಮಹಿಳಾ ಮೋರ್ಚಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.








