ಬಿಜೆಪಿಯಿಂದ ಅವಿಶ್ವಾಸ ನಿರ್ಣಯ ಹಿನ್ನೆಲೆ: ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣ ರೆಡ್ಡಿ ರಾಜೀನಾಮೆ

ಬೆಂಗಳೂರು, ಮಾ.17: ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾ ರೆಡ್ಡಿಯವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಲಲು ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌ನ ಕೆ.ಆರ್.ರಮೇಶ್ ಕುಮಾರ್ ವಿಧಾನಸಭೆ ಸಭಾಧ್ಯಕ್ಷರಾಗಿ ಜೆಡಿಎಸ್‌ನ ಕೃಷ್ಣಾ ರೆಡ್ಡಿ ಉಪಾಧ್ಯಕ್ಷರಾಗಿಯೂ ನೇಮಕವಾಗಿದ್ದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತವೂ ಉಪಾಧ್ಯಕ್ಷ ಸ್ಥಾನದಲ್ಲಿ ಬದಲಾವಣೆಯಾಗಿರಲಿಲ್ಲ. ಕೃಷ್ಣಾ ರೆಡ್ಡಿ ತಾವೇ ಉಪಾಧ್ಯಕ್ಷರಾಗಿ ಮುಂದುವರಿದಿದ್ದರು.

Also Read  ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಗೆ ಬೈಕ್ ಢಿಕ್ಕಿ- ಮೃತ್ಯು..! ➤ ಗುರುತು ಪತ್ತೆಗೆ ಮನವಿ

ಕೃಷ್ಣಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ವಿಚಾರವನ್ನು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.
ಪ್ರಶ್ನೋತ್ತರ ಅವಧಿಯ ನಂತರ ಕಾಗೇರಿ ಈ ವಿಷಯ ತಿಳಿಸಿ ಅವರು ರಾಜೀನಾಮೆ ನೀಡಿರುವ ಕಾರಣ ಅವಿಶ್ವಾಸ ನಿರ್ಣಯ ಪ್ರಸ್ತಾಪ ಕೈಬಿಡುವುದಾಗಿ ಹೇಳಿದರು.

error: Content is protected !!
Scroll to Top