ಕಡಬ: ಮೂರು ಮಕ್ಕಳ‌ ತಂದೆಯಿಂದ ಅಪ್ರಾಪ್ತೆಯ ಅತ್ಯಾಚಾರ ➤ ಅಪ್ರಾಪ್ತ ಬಾಲಕಿ ಇದೀಗ ಆರು ತಿಂಗಳ ಗರ್ಭಿಣಿ



(ನ್ಯೂಸ್ ಕಡಬ) newskadaba.com ಕಡಬ, ಮಾ.19. ಮೂರು ಮಕ್ಕಳ ತಂದೆಯೋರ್ವ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದುದರಿಂದ ಆಕೆ ಇದೀಗ ಆರು ತಿಂಗಳ ಗರ್ಭಿಣಿಯಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.





ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಕೆರ್ಮಾಯಿ ಸಿ ಆರ್ ಸಿ ಕಾಲನಿ ನಿವಾಸಿ ಮಹಾದೇವ(40) ಎಂದು ಗುರುತಿಸಲಾಗಿದೆ. ಆರೋಪಿಯು ಕಡಬ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದಿದ್ದು, ಇದೀಗ ಆಕೆ ಆರು ತಿಂಗಳ ಗರ್ಭಿಣಿಯಾಗಿದ್ದರಿಂದ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ನೀಡಿದ ದೂರಿನಂತೆ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.






error: Content is protected !!
Scroll to Top