ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.20. ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತಡ್ಕ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ.





ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾವತ್ತಡ್ಕದಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ಅಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಗಳೂರಿನಿಂದ ಅಧಿಕಾರಿಗಳು ಆಗಮಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಟ್ಯಾಂಕರ್ ಅನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.






error: Content is protected !!
Scroll to Top