ಕರ್ನಾಟಕ – ಕೇರಳ ಗಡಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ➤ ಕೊರೋನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಕೇರಳ ರಾಜ್ಯದ ಕಾಸರಗೋಡಿನಲ್ಲಿ ಕೊರೋನ ವೈರಸ್ ಪತ್ತೆಯಾಗಿರುವುದರಿಂದ ದಕ್ಷಿಣ ಕನ್ನಡಕ್ಕೆ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21 ಶನಿವಾರ ಮಧ್ಯಾಹ್ನ‌‌ 2ರಿಂದ ಮಾ.31ರ ಮಧ್ಯರಾತ್ರಿ 12ರವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.

ಕರಾವಳಿಯಿಂದ ಕೇರಳವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದ್ದು, ತುರ್ತು ‌ಸಂದರ್ಭದಲ್ಲಿ ತಲಪಾಡಿ ಚೆಕ್‌ಪೋಸ್ಟ್ ಮೂಲಕ‌ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Also Read  2023 ಐಸಿಸಿ ಮಹಿಳಾ ಟಿ20 ವಿಶ್ವಕಪ್ ➤ ಟೀಂ ಇಂಡಿಯಾದಿಂದ ಓರ್ವ ಆಟಗಾರ್ತಿಯ ಆಯ್ಕೆ!

error: Content is protected !!
Scroll to Top