BREAKING NEWS ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ 20ಕ್ಕೆ ಏರಿಕೆ

  • ಶನಿವಾರ ಒಂದೇ ದಿನ ಐದು ಪ್ರಕರಣ ಪತ್ತೆ

ಬೆಂಗಳೂರು, ಮಾ.21: ಮಹಾಮಾರಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಶನಿವಾರ ಐದು ಹೊಸ ಪ್ರಕರಣಗಳು ಬೆಳಕಿದೆ ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ ಮತ್ತು ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣ ಹಾಗೂ ಮೈಸೂರಿನಲ್ಲಿ ಒಂದು ಪ್ರಕರಣ ದೃಢವಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 20ಕ್ಕೇರಿದೆ. ಮೈಸೂರಿನಲ್ಲಿ ಇದು ಪ್ರಥಮ ಪ್ರಕರಣವಾಗಿದೆ ಎಂದು ತಿಳಿದು ಬಂದಿದೆ.

ಮಕ್ಕಾ ಪ್ರವಾಸದಿಂದ ಆಗಮಿಸಿದ್ದ 32 ವರ್ಷದ ಚಿಕ್ಕಬಳ್ಳಾಪುರ ಗೌರಿಬಿದನೂರಿನ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದರು. ನಂತರ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಬೆಂಗಳೂರಿನಲ್ಲಿ ಮೂವರು ಹಾಗೂ ಮೈಸೂರಿನಲ್ಲಿ ಓರ್ವ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ಧಾರೆ. ಭಾರತದಲ್ಲಿ ಒಟ್ಟು 272 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

Also Read  ಉತ್ತರಪ್ರದೇಶದ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು

error: Content is protected !!
Scroll to Top