ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ: ಸಿಎಂ ಘೋಷಣೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.22. ಕೊರೋನ ವೈರಸ್ ಸೋಂಕು ಭೀತಿಯ ಹಿನ್ನೆಲೆಯಲ್ಲಿ ಮಾ.27ರಿಂದ ಆರಂಭವಾಗಬೇಕಿದ್ದ ಎಸೆಸೆಲ್ಸಿ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.





ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆ ಯಾವುದೇ ರೀತಿಯಲ್ಲಿ ಗಾಬರಿಯಾಗುವ ಅಗತ್ಯವಿಲ್ಲ. ಎಸ್ಸೆಸ್ಸೆಲ್ಸಿ ಜೊತೆಗೆ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳು, ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಗಳನ್ನು ಮುಂದೂಡಲಾಗಿದೆ. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಎರಡು ತಿಂಗಳ ಪಡಿತರವನ್ನು ವಿತರಿಸಲಾಗುವುದು ಎಂದರು ಹೇಳಿದರು.






error: Content is protected !!
Scroll to Top