ನಾಳೆ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ➤ ಯಾರೂ ಮನೆಯಿಂದ ಹೊರಬರದಂತೆ ಜಿಲ್ಲಾಧಿಕಾರಿ ಆದೇಶ



(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.27. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸಿ, ಎಲ್ಲಾ ಚಟುವಟಿಕೆ, ವಾಣಿಜ್ಯ, ವ್ಯವಹಾರಗಳನ್ನು ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.





 

 

ಶುಕ್ರವಾರದಂದು ನಡೆದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ದಿನೇ ದಿನೇ ಕೊರೋನಾ ಅಟ್ಟಹಾಸ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ.






error: Content is protected !!
Scroll to Top