ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳು ‘ರೆಡ್ ಝೋನ್’ ಘೋಷಣೆ ➤ ಈ ನಾಲ್ಕು ಜಿಲ್ಲೆಗಳಲ್ಲಿ ಕೊರೋನಾ ಬಗ್ಗೆ ತೀವ್ರ ನಿಗಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.01. ಕೊರೋನಾ ವೈರಸ್ ನಿಂದ ತತ್ತರಿಸಿರುವ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳನ್ನು ರೆಡ್ ಝೋನ್ ಎಂದು ರಾಜ್ಯ ಸರಕಾರ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ, ಮೈಸೂರು, ಉತ್ತರ ಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ರಾಜ್ಯ ಸರ್ಕಾರ ರೆಡ್ ಝೋನ್ ಎಂದು ಘೋಷಣೆ ಮಾಡಿದೆ. ಕೊರೋನಾ ಸೋಂಕನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ರಾಜ್ಯ ಸರ್ಕಾರ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದೆ. ರೆಡ್ ಝೋನ್ ಘೋಷಣೆಯಾಗಿರುವ ನಗರ ಹಾಗೂ ಜಿಲ್ಲೆಗಳ ಮೇಲೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಮನೆಗಳ ಬಾಗಿಲಿಗೆ ತೆರಳಿ ಕೊರೋನಾ ಜಾಗೃತಿ ಮೂಡಿಸಿ, ಕ್ವಾರಂಟೈನ್ ನಲ್ಲಿರುವ ಜನರ ಸಂಪರ್ಕದಲ್ಲಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಈ ಜಿಲ್ಲೆಗಳಲ್ಲಿ ಘೋಷಣೆ ಮಾಡಲಾಗಿರುವ ಲಾಕ್’ಡೌನ್ ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಲಾಗುತ್ತದೆ. ಬೆಂಗಳೂರು ನಗರವನ್ನು ಈಗಾಗಲೇ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ‘ಕೊರೋನಾ ಹಾಟ್‌ ಸ್ಪಾಟ್’ ಎಂದು ಘೋಷಣೆ ಮಾಡಿದ್ದು, ತೀವ್ರ ನಿಗಾ ಇಡಲಾಗಿದೆ.

Also Read  ಉಡುಪಿ: ಪ್ರಯಾಣಿಕರ ಸೋಗಿನಲ್ಲಿ ಬಂದು ಪರ್ಸ್ ಕಳವುಗೈದ ಮೂವರು ಮಹಿಳೆಯರು

error: Content is protected !!