ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ

ಮೈಸೂರು, ಎ.6: ರಾಜ್ಯದಲ್ಲಿ ಸೋಮವಾರ ಹೊಸದಾಗಿ 12 ಮಂದಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 163ಕ್ಕೇರಿದೆ.

ಈ ಪೈಕಿ ಮೈಸೂರು ಜಿಲ್ಲೆಯಲ್ಲಿ 7 ಸೋಂಕಿತರು ಪತ್ತೆಯಾಗಿದ್ದರೆ, ಬಾಗಲಕೋಟೆಯಲ್ಲಿ ಇಬ್ಬರಿಗೆ ಕೊರೋನ ಪಾಸಿಟಿವ್ ಆಗಿದೆ. ಹಾಗೆಯೇ ಬೆಂಗಳೂರು ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ ಹಾಗೂ ಕೇರಳ ಮೂಲದ ತಲಾ ಒಬ್ಬರಲ್ಲಿ ಕೊರೋನ ಸೋಂಕು ಹರಡಿರುವುದು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ163ಕ್ಕೆ ಏರಿದೆ.

Also Read  ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಕೊರೋ‌ನಾ ನಾಲ್ಕನೇ ಅಲೆ ➤ ಆರೋಗ್ಯ ಸಚಿವ ಡಾ| ಸುಧಾಕರ್ ಎಚ್ಚರಿಕೆ

error: Content is protected !!
Scroll to Top