ಕಡಬ ಪರಿಸರದಲ್ಲಿ ಉತ್ತಮ ಮಳೆ ➤ ಇಳೆಗೆ ತಂಪೆರೆದ ಮಳೆರಾಯ

(ನ್ಯೂಸ್ ಕಡಬ) newskadaba.com ಕಡಬ, ಎ.07. ಕಡಬ ಪರಿಸರದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಉತ್ತಮ ಮಳೆಯಾಗಿದ್ದು, ಬಿಸಿಲಿನ ಬೇಗೆಗೆ ಬೆಂದು ಕೆಂಡವಾಗಿದ್ದ ಭೂಮಿಯನ್ನು ತಂಪಾಗಿಸಿದೆ.

ಕಳೆದೆರಡು ದಿನಗಳಿಂದ ಕಡಬ ಪರಿಸರದ ಕುಕ್ಕೇ ಸುಬ್ರಹ್ಮಣ್ಯ, ಬಿಳಿನೆಲೆ, ಪಂಜ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಸ್ವಲ್ಪ ಮಟ್ಟಿಗೆ ಶೆಖೆಯು ಕಡಿಮೆಯಾಗಿದೆ. ಮಂಗಳವಾರ ಬೆಳಗಿನ ಜಾವ ಮತ್ತೆ ಉತ್ತಮ ಮಳೆಯಾಗಿದ್ದು, ಹವಾಮಾನ ಇಲಾಖೆಯು ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

Also Read  ಫೆ.11ರಂದು ಪುತ್ತೂರಿಗೆ 'ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ'

error: Content is protected !!